Karnataka NewsLatestPolitics

*ಸತೀಶ್ ಗೆ ಬಿಗ್ ಶಾಕ್: ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಅಮಾನತು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಸಾಲು ಸಾಲು ನಾಯಕರನ್ನು ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗುತ್ತಿದೆ. ಮೊನ್ನೆಯಷ್ಟೇ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಆರು ವರ್ಷಗಳ ಕಾಲ ಸಸ್ಪೆಂಡ್ ಮಾಡಲಾಗಿದೆ.

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಹಾಗೂ ಬಮೂಲ್ ನಿರ್ದೇಶಕರಾಗಿರುವ ಆಗಿರುವ ಸತೀಶ್ ಕಡತನಮಲೆ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

Home add -Advt

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಈ ಕ್ರಮಕೈಗೊಳ್ಳಲಾಗಿದೆ. ಸತೀಶ್ ಅವರ ನಡವಳಿಕೆ ಕುರಿತು ಸ್ಥಳೀಯ ಮುಖಂಡರು ರಾಜ್ಯ ಶಿಸ್ತು ಸಮಿತಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಅವರಿಗೆ ನೋಟಿಸ್ ನೀಡಿ ಸ್ಪಷ್ಟೀಕರಣ ಕೇಳಿತ್ತು. ಆದರೆ ಸತೀಶ್ ಕಡತನಮಲೆ ಅವರು ನೀಡಿದ ಸ್ಪಷ್ಟೀಕರಣವು ಸಮಂಜಸ ಹಾಗೂ ತೃಪ್ತಿಕರವಾಗಿಲ್ಲದ ಕಾರಣ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Related Articles

Back to top button