Karnataka NewsLatest

*ಗಣಪತಿ ಮೂರ್ತಿಯನ್ನೇ ಬಂಧಿಸಿದ ಪೊಲೀಸರು*

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಪ್ರಗತಿವಾಹಿನಿ ಸುದ್ದಿ: ನೆಲಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣ ಖಂಡಿಸಿ ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಹಿಂದೂಪರ ಸಂಘಟನೆ, ಗಣೇಶ ಉತ್ಸವ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಅವರ ಬಳಿ ಇದ್ದ ಗಣಪತಿ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಕಾಂಗ್ರೆಸ್ ಸರ್ಕಾರ ರಾಹು ಕಾಲಕ್ಕೆ ಗಣೇಶ ಮೂರ್ತಿಗಳನ್ನು ಬಂಧಿಸಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಅದೆಷ್ಟರಮಟ್ಟಿಗೆ ಲಜ್ಜೆ ಬಿಟ್ಟು ನಿಂತಿದೆ ಎನ್ನುವುದಕ್ಕೆ ಗಣೇಶ ಮೂರ್ತಿಯನ್ನೇ ಬಂಧಿಸಿ ಪೊಲೀಸ್ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿರುವುದೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Home add -Advt

ಇಷ್ಟು ದಿನ ಹಿಂದೂಗಳ ಮೇಲೆ ದಾಳಿ ಮಾಡಿಸುವುದು, ಹಿಂದೂಗಳ ಭೂಮಿ ಕಬಳಿಸುವುದು, ಹಿಂದೂಗಳ‌ನ್ನು ಬಂಧಿಸುವುದು, ಹಿಂದೂಗಳನ್ನು ಹತ್ತಿಕ್ಕುತ್ತಿದ್ದ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರು ಗಣೇಶ ಮೂರ್ತಿಗಳನ್ನೇ ಬಂಧಿಸಿರುವುದು “ರಾಹು ಕಾಲ” ಶೀಘ್ರದಲ್ಲೇ ಕೊನೆಯಾಗಲಿದೆ ಎಂಬುದರ ಮುನ್ಸೂಚನೆ ಎಂದು ಹೇಳಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button