ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ವಾಕ್ಸಮರ ತಾರಕಕ್ಕೇರಿದೆ. ರಾಜ್ಯ ಬಿಜೆಪಿ ಘಟಕ ಕಾಂಗ್ರೆಸ್ ಭ್ರಷ್ಟಾಚಾರದ ಸಾಧಕರ ಪಟ್ಟಿ ಬಿಡುಗಡೆ ಮಾಡಿದೆ.
ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಚಾಟಿ ಬೀಸಿರುವ ಬಿಜೆಪಿ, ಭ್ರಷ್ಟಾಚಾರದಲ್ಲಿ ವಿಶೇಷ ಸಾಧನೆ ಮಾಡಿದ ಕಾಂಗ್ರೆಸ್ ನಾಯಕರ ಪಟ್ಟಿ ಹೀಗಿದೆ ಎಂದಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಿ.ಚಿದಂಬರಂ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್ ಎಷ್ಟೊಂದು ಭ್ರಷ್ಟರು..ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ತವರುಮನೆ ಎಂದು ವಾಗ್ದಾಳಿ ನಡೆಸಿದೆ.
ಭ್ರಷ್ಟಾತಿ ಭ್ರಷ್ಟ ಎಂದರೆ ಎಂಎಂಕೆ. ಇದು ದಶಕಗಳಿಂದ ಕಲ್ಯಾಣ ಕರ್ನಾಟಕವನ್ನು ಲೂಟಿ ಮಾಡಿದ ಭ್ರಷ್ಟ ಕಾಂಗ್ರೆಸ್ಸಿಗನ ಸಂಕ್ಷಿಪ್ತ ಹೆಸರು. ಮಲ್ಲಿಕಾರ್ಜುನ ಖರ್ಗೆ ಅವರ ಸಂಪತ್ತಿನ ಲೆಕ್ಕವನ್ನು ಜನರ ಮುಂದಿಡಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವೇ? ನಕಲಿ ಗಾಂಧಿ ಕುಟುಂಬದ ಆಸ್ತಿ ಎಷ್ಟೆಂದು ಯಾರಿಗಾದರೂ ಗೊತ್ತೇ? ಅದರಲ್ಲಿ ಬೇನಾಮಿ ಎಷ್ಟೆಂದು ಲೆಕ್ಕ ಹಾಕಿ ಹೇಳಲು ಸಾಧ್ಯವೇ? ಸೋನಿಯಾ ಗಾಂಧಿ ಪಾಲೆಷ್ಟು ಗೊತ್ತೇ? ಕಾಂಗ್ರೆಸ್ ಭ್ರಷ್ಟಾಚಾರ ಎಲ್ಲಿಯವರೆಗೆ ತಲುಪಿತ್ತು ಎಂದರೆ ನಕಲಿ ಗಾಂಧಿ ಕುಟುಂಬ ಪಕ್ಷದ ಆಸ್ತಿಯನ್ನೇ ಕಬಳಿಸಿದೆ ಎಂದು ವಾಗ್ದಾಳಿ ನಡೆಸಿದೆ.
ಇವರೆಲ್ಲ ಬೆಂಜ್ ಕಾರ್ ಗಿರಾಕಿಗಳು; ಸಿದ್ದರಾಮಯ್ಯ ವಿರುದ್ಧ ಸಿಎಂ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ