ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಕರಣದ ಆರೋಪಿಗಳೊಂದಿಗೆ ಸಂಬಂಧವಿರುವುದನ್ನು ಮಹಾನಾಯಕ ಒಪ್ಪಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳೊಂದಿಗೆ ಸಂಬಂಧವಿರುವುದನ್ನು ಮಹಾನಾಯಕ ಒಪ್ಪಿಕೊಂಡಿದ್ದಾರೆ. ಪ್ರಕರಣದ ಮಾಸ್ಟರ್ ಮೈಂಡ್‌ಗಳೊಂದಿಗೆ ಯಾವ ರೀತಿಯ ಸಂಬಂಧವಿತ್ತೆಂಬುದನ್ನು ರಾಜ್ಯದ ಜನತೆಯ ಮುಂದೆ ಖಳನಾಯಕ ಬಹಿರಂಗಪಡಿಸಬೇಕು. ಸದನದಲ್ಲಿ ಬೊಬ್ಬೆ ಹಾಕಿದ ಶೂರರೆಲ್ಲಾ ಏಕೆ ಇಂದು ಮೌನವಾಗಿದ್ದಾರೆ? ಎಂದು ವಾಗ್ದಾಳಿ ನಡೆಸಿದೆ.
ಡಿ.ಕೆ.ಶಿವಕುಮಾರ್ ಅವರೇ ಆರಂಭದಲ್ಲಿ ಹೆಗಲು ಮುಟ್ಟಿಕೊಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದಿರಿ. ಈಗ ಸಂತ್ರಸ್ಥೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ, ನರೇಶ್ ಮನೆಗೆ ಹೋಗಿದ್ದೇನೆ ಎನ್ನುತ್ತಿದ್ದೀರಿ. ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತಿತ್ತು ಎಂಬುದು ಸ್ಪಷ್ಟ ಅಲ್ಲವೇ? ಪಕ್ಷಕ್ಕೆ ಬದ್ಧತೆ ಅನ್ನುವುದಿದ್ದರೆ ಮೊದಲು ಮಹಾನಾಯಕನ ರಾಜೀನಾಮೆ ಪಡೆಯಲಿ ಎಂದು ಆಗ್ರಹಿಸಿದೆ.
ಕಳಂಕಿತರಿಂದ ಉತ್ತರ ಪಡೆಯುವುದಿಲ್ಲವೆಂದು ಸದನದ ಸಮಯವನ್ನು ಹಾಳುಗೆಡವಿದ ಕಾಂಗ್ರೆಸ್ ನಾಯಕರೇ ಸಂತ್ರಸ್ಥೆಯೇ ಹೇಳಿದಂತೆ, ಷಡ್ಯಂತ್ರದ ಭಾಗವಾಗಿರುವ
ಡಿ.ಕೆ.ಶಿವಕುಮಾರ್ ಮಾಡಿರುವ ಘನಂದಾರಿ ಕೆಲಸವನ್ನು ಸಮರ್ಥಿಸುತ್ತೀರಾ? ಇಂಥಹ ಹೀನ ಕೆಲಸ ನಿರ್ವಹಣೆ ಮಾಡುವುದಕ್ಕೆ ಕೆಪಿಸಿಸಿಯಲ್ಲಿ ಪ್ರತ್ಯೇಕ ಘಟಕ ತೆರೆಯಲಾಗಿದೆಯಾ? ಕಾಗೆ ಹಿಕ್ಕೆ ಹಾಕಿದ್ದಕ್ಕೂ ಮೂಗು ತೂರಿಸುವ ಸೆಕ್ಷನ್ ಬಗ್ಗೆ ಮಾತನಾಡುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಈಗ ಸಿಡಿ ಷಡ್ಯಂತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರ ಪಾತ್ರದ ಬಗ್ಗೆ ಏಕೆ ಮೌನವಾಗಿದ್ದೀರಿ? ಎಂದು ಬಿಜೆಪಿ ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ