Politics

*ರಾಜೀನಾಮೆ ನೀಡಿ, ತನಿಖೆ ಎದುರಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಆರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ ಸಿದ್ದರಾಮಯ್ಯನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ರಾಜ್ಯ ಬಿಜೆಪಿ ಘಟಕ ಆಗ್ರಹಿಸಿದೆ.

ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದೆ.

ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳಿಕೆ ನೀಡಿ, ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನ, ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಮಾನ್ಯ ಹೈಕೋರ್ಟ್ ನ ತೀರ್ಪು ಇಡೀ @INCKarnataka ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ.

ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು
ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಅಶೋಕ ಹೇಳಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button