ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮ ಹಾಗೂ ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಶಿಕ್ಷಕಿ ವಿರುದ್ಧ ಪೋಷಕರು, ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದೆ. ಈ ಪ್ರಕರಣ ಸಂಬಂಧ ಈಗ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪಾಂಡವೇಶ್ವರ ಪೊಲೀಸ್ ಠಾಣೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮ ಹಾಗೂ ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು, ಪೋಷಕರು, ಹಿಂದೂ ಸಂಘಟನೆ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಈ ವೇಳೆ ಶಾಸಕ ವೇದವ್ಯಾಸ್ ಕಾಮತ್ ಪೋಷಕರೊಂದಿಗೆ ಶಾಲೆ ಬಳಿ ತೆರಳಿ ಶಿಕ್ಷಕಿಯನ್ನು ಅಮಾನತು ಮಾಡುವಂತೆ ಪೋಷಕರು ಒತ್ತಾಯಿಸಿದ್ದಾರೆ. ಅಮನತು ಮಾಡುವಂತೆ ಒತ್ತಾಯಿಸಿದ್ದರು. ಪ್ರಕರಣ ಬಳಿಕ ಶಿಕ್ಷಕಿಯನ್ನು ಅಮಾನತು ಮಾಡಲಾಗಿತ್ತು. ಆದರೆ ಈ ಘಟನೆ ಇದೀಗ ರಾಜಕೀಯ ತಿರುವು ಪಡೆದಿದೆ.
ಹಿಂದೂ, ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದನೆ, ಜಿಲ್ಲೆಯಲ್ಲಿ ಶಾಂತಿ, ನೆಮ್ಮದಿಗೆ ಭಂಗ,ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಕಾರಣ ಹಾಗೂ ಶಾಲೆಯ ಎದುರು ಅಕ್ರಮವಾಗಿ ಗುಂಪುಗೂಡಿ ಗಲಾಟೆ ಹಿನ್ನೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಹಾಗೂ ಹಿಂದೂ ಸಂಘಟನೆ ಕೆಲ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ