Kannada NewsLatest

ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ; ಅರುಣ್ ಸಿಂಗ್ ವಿಶ್ವಾಸ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರಕಾರದ ಸಾಧನೆಗಳನ್ನು ಮುಂದಿಟ್ಟು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಜ್ಜಾಗಿದೆ. ಚುನಾವಣೆಯಲ್ಲಿ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ ಸಿಂಗ್ ಹೇಳಿದರು.

ಚಿಕ್ಕೋಡಿಯ ಕೇಶವ ಕಲಾಭವನದಲ್ಲಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶಾದ್ಯಂತ ಬಿಜೆಪಿ ಗೆಲುವಿನ ಟ್ರೆಂಡ್ ಇದೆ. ಗೋವಾ, ಮಣಿಪುರ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರಕಾರ ರಚಿಸಿದ್ದೇವೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಅಭೂತಪೂರ್ವ ಗೆಲವು ಸಾಧಿಸಲಿದೆ ಎಂದರು.

ಕಾಂಗ್ರೆಸ್ಸಿನದು ಭಾರತ್ ಜೋಡೊ ಯಾತ್ರೆಯಲ್ಲ, ಅದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ಜೋಡೊ ಯಾತ್ರೆಯಾಗಿದೆ ಎಂದು ಟೀಕಿಸಿದ ಅರುಣ ಸಿಂಗ್, ಭಾರತ ಮೊದಲಿಂದಲೂ ಕೂಡಿಕೊಂಡೇ ಇದೆ. ಹೊಸದಾಗಿ ಜೋಡಿಸುವ ಅಗತ್ಯವಿಲ್ಲ, ಅದರ ಬದಲಿಗೆ ಕಾಂಗ್ರೆಸ್ ಪಕ್ಷವನ್ನು ಮೊದಲು ಜೋಡಿಸಿಕೊಳ್ಳಲಿ ಎಂದು ಕಿಡಿ ಕಾರಿದರು.

Home add -Advt

ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕರಾದ ಧುರ್ಯೋಧನ ಐಹೊಳೆ, ಶ್ರೀಮಂತ ಪಾಟೀಲ, ವಿಧಾನಪರಿಷತ್ ಮಾಜಿ ಸಚೇತಕ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ರಾಜೇಶ ನೇರ್ಲಿ, ಮಾರುತಿ ಅಷ್ಟಗಿ, ಉಜ್ವಲಾ ಬಡವನಾಚೆ, ಶಾಂಭವಿ ಅಶ್ವತ್ಥಪುರ, ದುಂಡಪ್ಪ ಭೆಂಡವಾಡೆ ಇತರರು ಇದ್ದರು.

ಪಿಂಚಣಿ ಬೇಡಿಕೆ ಈಡೇರದಿದ್ದರೆ ಶಾಲಾ-ಕಾಲೇಜು ಬಂದ್ ಮಾಡಿ ತೀವ್ರ ಹೋರಾಟ: ನೌಕರರ ಸಂಘದಿಂದ ಎಚ್ಚರಿಕೆ

https://pragati.taskdun.com/latest/aided-schools-and-collegespension-deprived-employeesprotest/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button