
ಪ್ರಗತಿವಾಹಿನಿ ಸುದ್ದಿ: ತನ್ನ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದಕ್ಕೆ ಮನನೊಂದು ಬಿಜೆಪಿ ಕಾರ್ಯಕರ್ತ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.
ವಿನಯ್ ಸೋಮಯ್ಯ (೩೫) ಆತ್ಮಹತ್ಯೆ ಮಾಡಿಕೊಂಡಿರುವ ಬಿಜೆಪಿ ಕಾರ್ಯಕರ್ತ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದು, ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ.
ಕೆಲ ದಿನಗಳ ಹಿಂದೆ ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ, ವಿನಯ್ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ವಿನಯ್ ಸೋಮಯ್ಯ ಬಂಧನ ಭೀತಿಯಲ್ಲಿದ್ದರು. ಇದರಿಂದ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.




