Kannada NewsKarnataka NewsLatestPolitics

*ಕನ್ನಡದ ಬಗ್ಗೆ ಅಸಡ್ಡೆ ತೋರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ; ಬಿಜೆಪಿ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು ಮತ್ತು ಕೈಗಾರಿಕೆಗಳ ನಾಮಫಲಕಗಳಲ್ಲಿ ಶೇಕಡ 60%ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಇರಬೇಕೆಂಬ ನಿಯಮ ಜಾರಿಗೊಳಿಸಲು ನೀಡಲಾಗಿದ್ದ ಗಡುವು ನಾಳೆಗೆ ಮುಕ್ತಾಯವಾಗಲಿದ್ದು, ಇನ್ನೂ ಅನೇಕ ಕಡೆಗಳಲ್ಲಿ ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವಂತೆ ಅನ್ಯಭಾಷೆಯ ನಾಮಫಲಕಗಳು ರಾರಾಜಿಸುತ್ತಿವೆ ಎಂದು ವಿಪಕ್ಷ ಬಿಜೆಪಿ ಕಿಡಿಕಾರಿದೆ

ಅನ್ಯ ಭಾಷೆಯ ಫಲಕಗಳನ್ನು ತೆರವುಗೊಳಿಸಲು ಹೋರಾಟ ಮಾಡುತ್ತಿದ್ದ ಕನ್ನಡ ಪರ ಹೋರಾಟಗಾರರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಅವರ ಮೇಲೆ ಲಾಠಿ ಪ್ರಹಾರ ಮಾಡಿ, ಕೇಸು ಹಾಕಿ ಅವರನ್ನು ಬಂಧಿಸಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರ ಈಗ ಕಾನೂನು ಜಾರಿಗೆ ತರಲು ಸಂಪೂರ್ಣ ನಿರಾಸಕ್ತಿ ತೋರುತ್ತಿದೆ.

ಕನ್ನಡ ಕಡ್ಡಾಯ ಮಾಡುವ ನಿಯಮ ಕೇವಲ ಕಡತಕ್ಕೆ ಸೀಮಿತವಾಗದೆ, ಪ್ರಚಾರದ ವಸ್ತುವಾಗಿದೆ ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವ ಜವಾಬ್ದಾರಿ ಕಾಂಗ್ರೆಸ್ ಸರ್ಕಾರದ ಮೇಲಿದ್ದು ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.

ಕನ್ನಡಕ್ಕೆ ದ್ರೋಹ ಬಗೆದರೆ, ಕನ್ನಡದ ಬಗ್ಗೆ ಅಸಡ್ಡೆ ತೋರಿದರೆ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button