Latest

*7ನೇ ವೇತನ ಆಯೋಗ ವಿಚಾರ: ಸಂಜೆ ಹಿರಿಯ ಅಧಿಕಾರಿಗಳ ಸಭೆ ಕರೆದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಸಿದ್ದಾಪುರ: ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರದ ಎಚ್ಚರಿಕೆ ನೀಡಿದ್ದು, ಇದರ ಬೆನ್ನಲ್ಲೇ ಎಚ್ಚತ್ತ ರಾಜ್ಯ ಸರ್ಕಾರ ಇಂದು ಸಂಜೆ ಹಿರಿಯ ಅಧಿಕಾರಿಗಳ ಸಭೆ ಕರೆದಿದೆ.

Home add -Advt

7ನೇ ವೇತನ ಆಯೋಗ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರವಾಗಿ ಸಿದ್ದಾಪುರದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ಕಾರಿ ನೌಕರರು ನಮ್ಮವರು, ಅವರ ಬಗ್ಗೆ ನಮಗೆ ಕಾಳಜಿ ಇದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಸರ್ಕಾರಿ ನೌಕರರ ಸಂಘದ ಸದಸ್ಯರ ಜೊತೆ ಸಿಎಸ್ ವಂದಿತಾ ಶರ್ಮಾ ಸಭೆ ನಡೆಸಿದ್ದಾರೆ. ಮಧ್ಯಂತರ ವರದಿ ಸಿದ್ಧಪಡಿಸಲಾಗುತ್ತಿದೆ. ವರದಿ ಬಂದ ಕೂಡಲೇ ವೇತನ ಪರಿಷ್ಕರಣೆ ಮಾಡುತ್ತೇವೆ ಎಂದರು.

ಮುಷ್ಕರ ತಡೆಯಲು ಏಸ್ಮಾ ಜಾರಿ ಚಿಂತನೆ ಸರ್ಕಾರದ ಮುಂದೆ ಇಲ್ಲ. ಸಂಜೆ ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ನಾಳೆಯೊಳಗೆ ಎಲ್ಲವೂ ಬಗೆಹರಿಯಲಿದೆ ಎಂದು ತಿಳಿಸಿದರು.

*ನಾಳೆಯಿಂದ ರಾಜ್ಯಾದ್ಯಂತ ಶಾಲೆಗಳು ಬಂದ್?*

https://pragati.taskdun.com/state-govt-employees7th-pay-commissioninterim-reportteachersprotest/

Related Articles

Back to top button