Latest

ಬ್ಲ್ಯಾಕ್ ಫಂಗಸ್ ಗೆ ರಾಜ್ಯಕ್ಕೆ ಬಂತು ಔಷಧಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಭೀಕರತೆ ನಡುವೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಇದೀಗ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕಕ್ಕೆ ಬ್ಲ್ಯಾಕ್ ಫಂಗಸ್ ಗೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ. ಆಂಫೊಟೆರಿಸಿನ್ ಬಿ 1,270 ವಯಲ್ಸ್ ಗಳನ್ನು ರಾಜ್ಯಕ್ಕೆ ನೀಡಲಾಗಿದೆ ಎಂದು ಹೇಳಿದರು.

ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ 500 ಕೇಸ್ ಪತ್ತೆಯಾಗಿದೆ. ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚಿರುವ ರಾಜ್ಯಗಳಿಗೆ ಹೆಚ್ಚು ವಯಲ್ಸ್ ಹಂಚಲಾಗಿದ್ದು, ದೇಶದ ವಿವಿಧ ರಾಜ್ಯಗಳಿಗೆ 23,680 ವಯಲ್ಸ್ ನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ ಎಂದು ವಿವರಿಸಿದರು.
18ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ವ್ಯಾಕ್ಸಿನ್ ಪುನರಾರಂಭ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button