Kannada NewsKarnataka NewsLatest
*ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ; ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಅಶ್ಲೀಲ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ.
17 ವರ್ಷದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಯುವಕರಿಬ್ಬರ ಬ್ಲ್ಯಾಕ್ ಮೇಲ್ ಗೆ ಹೆದರಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ವಿದ್ಯಾರ್ಥಿನಿಯನ್ನು ಉಡುಪಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿದ್ದ ವಿಡಿಯೋ ವೈರಲ್ ಆಗಿತ್ತು.
ಇದೀಗ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ದಾವಣಗೆರೆ ಜಿಲ್ಲೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ