ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ: ವಿಡಿಯೋ ಕಾಲ್ ನಲ್ಲಿದ್ದ ಯುವತಿಯರ ಅಶ್ಲೀಲ ವೀಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತೀಕ್ (22) ಬಂಧಿತ. ಈತನ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊಬೈಲ್ ವಾಟ್ಸಪ್ ಗಳಲ್ಲಿ ಅಶ್ಲೀಲ ವೀಡಿಯೋ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ NSUI ಸಂಘಟನೆ ಸದಸ್ಯರು ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿವೈಎಸ್ಪಿಗೆ ಮನವಿ ಸಲ್ಲಿಸಿದ್ದರು. ಬಂಧಿತ ಯುವಕ ಕೆಲ ಯುವತಿಯರಿಗೆ ಆಮಿಷವೊಡ್ಡಿ ಅಶ್ಲೀಲ ವಿಡಿಯೋ ಮಾಡಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಸಂಘಟನೆ ಆರೋಪಿಸಿತ್ತು.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ