Latest

ನಗ್ನ ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್; ಮೂವರು ಆರೋಪಿಗಳು ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರನ್ನು ಪರಿಚಯಿಸಿಕೊಂಡು ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಹಣ ದೋಚುತ್ತಿದ್ದ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಸಾಕಿರ್, ಕಸಮ್ ಖಾನ್ ಹಾಗೂ ಜಮೀಲ್ ಖಾನ್ ಎಂಬ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರ ಹೆಸರಿನಲ್ಲಿ ಪರಿಚಯಿಸಿಕೊಂಡು, ಪುರುಷರ ಸ್ನೇಹ ಬೆಳೆಸಿ, ವಿಡಿಯೋ ಕಾಲ್ ಮಾಡಿ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.

Related Articles

ಫೇಸ್ ಬುಕ್ ಮೂಲಕ ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ಯುವತಿಯರ ಸೋಗಿನಲ್ಲಿ ಪರಿಚಯಿಸಿಕೊಳ್ಳುತ್ತಿದ್ದರು. ಸಲುಗೆಯಿಂದ ಮಾತನಾಡಿ ಬೆತ್ತಲಾಗುವಂತೆ ಪ್ರಚೋದಿಸಿ ವಿಡಿಯೋ ರೆಕಾರ್ಡ್ ಮಾಡಿ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿ ಹಣ ಪಡೆಯುತ್ತಿದ್ದರು. ಸ್ವತ: ಪೊಲೀಸ್ ಅಧಿಕಾರಿಗಳು ಈ ಜಾಲದ ಬಲೆಯಲ್ಲಿ ಸಿಲುಕಿದ್ದರು. ರಾಜಕಾರಣಿಗಳು, ಪತ್ರಕರ್ತರು, ಉದ್ಯಮಿಗಳೂ ಕೂಡ ಆರೋಪಿಗಳ ಬಲೆಗೆ ಬಿದ್ದಿದ್ದಾಗಿ ವಂಚನೆಗೊಳಗಾಅವರಿಂದ ದೂರು ದಾಖಲಾಗಿತ್ತು.

ತನಿಖೆ ನಡೆಸಿದ ಸಿಐಡಿ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ; ಸ್ವಪಕ್ಷದ ನಾಯಕರಿಂದಲೇ ಬಯಲು

Related Articles

Back to top button