Election NewsKannada NewsKarnataka NewsNationalPolitics

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರಕ್ಕೆ ಮೂಹೂರ್ತ ನಿಗದಿ

ಪ್ರಗತಿವಾಹಿನಿ ಸುದ್ದಿ : ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ನಿಗಧಿಯಾಗಿದೆ. ಭಾನುವಾರ ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಪ್ರಮಾಣ ಸ್ವೀಕರಿಸಲಿದ್ದಾರೆ.

ಪ್ರಧಾನಮಂತ್ರಿಗಳ ಜೊತೆಗೆ ಕೇಂದ್ರ ಸಚಿವ ಸಂಪುಟದ ಇತರ ಸದಸ್ಯರಿಗೆ ರಾಷ್ಟ್ರಪತಿಗಳು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ, ಮಾಲ್ಡೀವ್ಸ್ ಸೇರಿದಂತೆ ವಿವಿಧ ದೇಶಗಳ ಅಧ್ಯಕ್ಷರು, ಗಣ್ಯರು ಹಾಜರಿರಲಿದ್ದಾರೆ.

ಶುಕ್ರವಾರ ನಡೆದ ಎನ್‌ಡಿಎ ಮಿತ್ರ ಪಕ್ಷಗಳ ಎಲ್ಲ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಯಿತು. ನಂತರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಿ ಮೋದಿಯವರು ಸರ್ಕಾರ ರಚನೆಗೆ ತಮ್ಮ ಹಕ್ಕು ಮಂಡಿಸಿದರು.

Home add -Advt

Related Articles

Back to top button