Kannada NewsKarnataka NewsLatest
*ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ: ಪ್ರಯಾಣಿಕನ ಮೇಲೆ ಹರಿದ ಬಸ್: ವ್ಯಕ್ತಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಅಟ್ಟಹಾಸಕ್ಕೆ ಸಾವು ನೋವುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರಯಾಣಿಕರೊಬ್ಬರ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳ್ಯ್ರಿನ ಜಯನಗರ ಬಸ್ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ಏಕಾಏಕಿ ಆಯತಪ್ಪಿ ಬಿದ್ದಿದ್ದ ಪ್ರಯಾಣಿಕನ ಮೇಲೆಯೇ ಬಸ್ ಹರಿದು ಹೋಗಿದೆ. ಬಸ್ಸಿನ ಮುಂಭಾಗದ ಚಕ್ರದಡಿ ಸಿಲುಕಿದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.