BMTC ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಟ್ವಿಸ್ಟ್ ಕೊಟ್ಟ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿದ್ದಾನೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸುಮ್ಮನಹಳ್ಳಿ-ಲಗ್ಗೆರೆ ರಿಂಗ್ ರಸ್ತೆಯಲ್ಲಿ ನಡೆದಿದೆ.
ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪ್ರಮೋದ್ ಮೃತ ದುರ್ದೈವಿ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ತಡೆದು ನಿಲ್ಲಿಸಿದ ಸಾರ್ವಜನಿಕರು ಬಸ್ ಚಾಲಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ.
ಬೈಕ್ ಸವಾರ ಸಾವನ್ನಪ್ಪಲು ಕಾರಣ ರೋಡ್ ಸ್ಟ್ರಿಪ್ಸ್. ಸುಮ್ಮನಹಳ್ಳಿ-ಲಗ್ಗೆರೆ ರಿಂಗ್ ರಸ್ತೆಯ ಬಳಿ ರೋಡ್ ಸ್ಟ್ರಿಪ್ಸ್ ಬಳಿ ಬೈಕ್ ಸವಾರ ಬೈಕ್ ಸ್ಲೋ ಮಾಡಿದ್ದಾನೆ. ಈ ವೇಳೆ ವೇಗವಾಗಿ ಬಂದ ಬೈಕ್ ಹಿಂಬದಿಯಿಂದ ಡಿಕ್ಕಿಹೊಡೆದಿದೆ. ಬೈಕ್ ನಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ.
PSI ನೇಮಕಾತಿ ಹಗರಣ: First Rank ಸುಪ್ರಿಯಾ ಬಂಧನ
https://pragati.taskdun.com/latest/psi-scamfirst-rank-candidatesupriyaarrested/




