Kannada NewsKarnataka NewsLatest
*ಭೀಕರ ಅಪಘಾತ; BMTC ಬಸ್ ಗೆ ಮಹಿಳೆ ಬಲಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಗೆ ಪಾದಚಾರಿ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಕಬ್ಬನ್ ಪೇಟೆ ನಿವಾಸಿ ಪುಷ್ಪಾ ಮೃತ ಮಹಿಳೆ. ನಡೆದು ಹೋಗುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಸುಬ್ಬಯ್ಯ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘತದ ಬಳಿಕ ಬಸ್ ಚಾಲಕ ನಾಗರಾಜ್ ಎಂಬುವವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.




