Kannada NewsKarnataka NewsLatest

*BMTC ಬಸ್-ಬೈಕ್ ಅಪಘಾತ; ಗರ್ಭಿಣಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಎಂಟಿಸಿ ಬಸ್ ಗೆ ಗರ್ಭಿಣಿಯೊಬ್ಬರು ಬಲಿಯಾಗಿರುವ ಘಟನೆ ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ನಡೆದಿದೆ.

ಸೀಮಾ (21) ಮೃತ ಗರ್ಭಿಣಿ. ಸೀಮಾ ಪತಿ ಹಾಗೂ 2 ವರ್ಷದ ಮಗುವಿನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿಯಾಗಿದೆ. ಮೂವರು ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮಹಿಳೆ ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

Home add -Advt

ಮಗು ಹಾಗೂ ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಅಪಘಾತದ ಬಳಿಕ ಬಸ್ ಬಿಟ್ಟು ಚಾಲಕ ಹಾಗೂ ನಿರ್ವಾಹಕ ನಾಪತ್ತೆಯಾಗಿದ್ದಾರೆ. ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯೆ ಅಪಘಾತಕ್ಕೆ ಕಾರಣವಾಗಿದೆ.

ಮೂಲತಃ ವಿಜಯನಗರ ಜಿಲ್ಲೆಯ ಶ್ರೀಕಂಠಪುರ ತಾಲೂಕಿನವರಾದ ಗುರುಮೂರ್ತಿ ದಂಪತಿ ಉದ್ಯೋಗದ ನಿಮಿತ್ತ ಬೆಂಗಳೂರಿನಲ್ಲಿ ವಾಸವಾಗಿದ್ದರು. ಗುರುಮೂರ್ತಿ ಬೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಡಿವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button