
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಎಂಟಿಸಿ ಬಸ್, ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾನೆ. ಇಂಜಿನಿಯರಿಂಗ್ ವಿದ್ಯಾರ್ಥಿ ಗಂಗಾಧರ್ ಮೃತ ದುರ್ದೈವಿ. ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಗಂಗಾಧರ್ ಇಂಟರ್ನ್ ಶಿಪ್ ಸರ್ಟಿಫಿಕೇಟ್ ತರಲೆಂದು ಹೆಚ್ ಎ ಎಲ್ ಗೆ ಬೈಕ್ ನಲ್ಲಿ ತೆರಳುತ್ತಿದ್ದ. ಈ ವೇಳೆ ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಗಂಗಾಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ