
ಪ್ರಗತಿವಾಹಿನಿ ಸುದ್ದಿ: ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
21 ವರ್ಷದ ಕುಸುಮಿತಾ ಮೃತ ವಿದ್ಯಾರ್ಥಿನಿ. ಇಂದು ಬೆಳಿಗ್ಗೆ ಎಂದಿನಂತೆ ಬೈಕ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಹರಿಶ್ಚಂದ್ರಘಾಟ್ ಬಳಿ ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಸ್ಥಳೀಯರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ