Kannada NewsKarnataka NewsLatest

*ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ*

ಪ್ರಗಗತಿವಾಹಿನಿ ಸುದ್ದಿ; ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ನೆಲಮಂಗಲ ಟೌನ್ ನಲ್ಲಿ ನಡೆದಿದೆ.

ನೆಲಮಂಗಲದಿಂದ ಮೆಜೆಸ್ಟಿಕ್ ಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಶಾರ್ಟ್ ಸಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಬಸ್ ಚಾಲಕ ಬಸ್ ನಿಲ್ಲಿಸಿ ಬೆಂಕಿ ನಂದಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ 9 ಜನ ಪ್ರಯಾಣಿಕರು ಪಾರಾಗಿದ್ದಾರೆ. ಭಾರಿ ಅನಾಹುತ ತಪ್ಪಿದೆ.

Home add -Advt

ಬಸ್ ನಲ್ಲಿ ಬೆಂಕಿ ಹಿನ್ನೆಲೆಯಲ್ಲಿ 9 ಪ್ರಯಾಣಿಕರನ್ನು ಬೇರೊಂದು ಬಸ್ ನಲ್ಲಿ ಬದಲಿ ವ್ಯವಸ್ಥೆ ಮಾಡಿ ಕಳುಹಿಸಲಾಗಿದೆ. ಬ್ಯಾಟರಿಯಲ್ಲಿ ಶಾರ್ಟ್ ಸಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ ಇನ್ಸ್ ಪೆಕ್ಟರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Related Articles

Back to top button