Latest

*ಬಿಎಂಟಿಸಿ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ಶಾಂತಿನಗರದ ಕಚೇರಿಯಲ್ಲಿ ಬಿಎಂಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

Home add -Advt

ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಬಿಎಂಟಿಸಿ ಕಚೇರಿಯಲ್ಲಿಯೇ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹೇಶ್ (45) ಆತ್ಮಹತ್ಯೆ ಮಾಡಿಕೊಂಡಿರುವ ಸಿಬ್ಬಂದಿ.

ಮಹೇಶ್ ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರು. ನಿನ್ನೆ ಕಚೇರಿಯ ಸೆಕ್ಯೂರಿಟಿ ಗಾರ್ಡ್ ಬಳಿ ರೆಕಾರ್ಡ್ ರೂಮ್ ನ ಕೀ ಕೇಳಿ ಪಡೆದುಕೊಂಡಿದ್ದರು. ಇದೀಗ ಬಿಎಂಟಿಸಿ ಕಚೇರಿಯಲ್ಲಿಯೇ ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಿಎಂಟಿಸಿ ಅಧಿಕಾರಿಗಳು ಮಹೇಶ್ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.


Related Articles

Back to top button