Kannada NewsKarnataka NewsLatestPolitics

*ಬಿಎಂಟಿಸಿಗೆ ಮಾರ್ಚ್ ಅಂತ್ಯಕ್ಕೆ 921ಎಲೆಕ್ಟ್ರಿಕಲ್ ಬಸ್: ಸಚಿವ ರಾಮಲಿಂಗಾರೆಡ್ಡಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ ಸುವರ್ಣ ವಿಧಾನಸೌಧ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 2024ರ ಮಾರ್ಚ ಅಂತ್ಯಕ್ಕೆ 921 ಎಲೆಕ್ಟಿçಕಲ್ ಬಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.


ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಇದುವರೆಗೆ ಸ್ಮಾರ್ಟ್ಸಿಟಿ ಯೋಜನೆಯಡಿ ಒಟ್ಟು 90 ಎಲೆಕ್ಟಿçಕ್ ಬಸ್‌ಗಳನ್ನು ಜಿಸಿಸಿ ಆಧಾರದ ಮೇಲೆ ಪಡೆದುಕೊಂಡಿದೆ. ಬಿಎಂಸಿಟಿಸಿಯಿAದ ಪ್ರಸ್ತುತ ಈಗ ಒಟ್ಟು 15 ಬಸ್ ಘಟಕ/ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ಸ್ಥಾಪಿಸಿ 390 ಎಲೆಕ್ಟಿçಕ್ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರವು ಬಿಎಂಟಿಸಿಗೆ 150 ಕೋಟಿ ರೂ.ಗಳ ಅನುದಾನ ನೀಡಿದೆ ಎಂದು ಸಚಿವರು ತಿಳಿಸಿದರು.


ಸ್ತ್ರೀ ಶಕ್ತಿ ಯೋಜನೆ ಜಾರಿಯ ಬಗ್ಗೆ ಕೆ.ಎಸ್.ನವೀನ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಕ್ತಿ ಯೋಜನೆಯು ಜಾರಿಯಾದ ನಂತರ ರಾಜ್ಯದ ರಸ್ತೆ ಸಾರಿಗೆ ನಿಗಮಗಳಲ್ಲಿ ಆದಾಯ ಹೆಚ್ಚಳವಾಗಿದೆ. ಶಕ್ತಿ ಯೋಜನೆ ಜಾರಿಯ ನಂತರ ಪ್ರತಿದಿನದ ಸರಾಸರಿಯ ಆದಾಯವು 2023-24ನೇ ಸಾಲಿನಲ್ಲಿ ಕ.ರಾ.ರ.ಸಾರಿಗೆ ನಿಗಮದಲ್ಲಿ 12.57 ಕೋಟಿ ರೂ., ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 5.39 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 6.60 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 5.92 ಕೋಟಿ ರೂ.ನಷ್ಟು ಆಗಿರುತ್ತದೆ ಎಂದು ತಿಳಿಸಿದರು.


ಶಕ್ತಿ ಯೋಜನೆ ಜಾರಿಯ ನಂತರ 108 ಕೋಟಿಗೂ ಆಧಿಕ ಜನರು ಈ ಯೋಜನೆಯ ಪ್ರಯೋಜನ ಪಡೆದಿದ್ದು, ಪ್ರತಿದಿನ 1.5 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ಮತ್ತೀಗ ಹೊಸದಾಗಿ 5,500 ಹೊಸ ಬಸ್‌ಗಳ ಖರೀದಿಗೆ ಅನುಮತಿ ನೀಡಿದ್ದು, 9000 ಸಿಬ್ಬಂದಿಯ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button