
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ಸಿಬ್ಬಂದಿಯೊಬ್ಬರು ಡಿಪೋ ಮ್ಯಾನೇಜರ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಇಂಡಿರಾನಗರ ಡಿಪೋದಲ್ಲಿ ನಡೆದಿದೆ.
ಬಿಎಂಟಿಸಿ ನೌಕರ ಕೇಶವ್ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ. ಕೆಲಸದ ವಿಚಾರವಾಗಿ ಡಿಪೋಗೆ ಬಂದಿದ್ದ ಕೇಶವ್ ಮ್ಯಾನೇಜರ್ ಎದುರೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಪೋನಂಬರ್ 6ರಲ್ಲಿ ಬಿಎಂಟಿಸಿ ಡ್ರೈವರ್ ಆಗಿ ಕೇಶವ್ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಏಪ್ರಿಲ್ ನಲ್ಲಿ ನಡೆದ ಮುಷ್ಕರದಲ್ಲಿ ಭಾಗಿಯಾಗಿದ್ದ ಕೇಶವ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಇಂದು ಡಿಪೋಗೆ ಬಂದಿದ್ದ ಕೇಶವ್ ಇದ್ದಕ್ಕಿದ್ದಂತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೇಶವ್ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದರು ಎನ್ನಲಾಗಿದೆ.
ತಂಗಿಯ ಮೇಲೆ ಅಣ್ಣನಿಂದಲೇ ನೀಚ ಕೃತ್ಯ