
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಬಿಎಂಟಿಸಿ-ಬೆಂಗಳೂರು ಮಹಾನಗರ ರಸ್ತೆಸಾರಿಗೆ ಸಂಸ್ಥೆ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ.
ಇಂದು ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಬಿಎಂಟಿಸಿಯ ಎಲ್ಲಾ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದು ದಿನದ ಮಟ್ಟಿಗೆ ಬಿಎಂಟಿಸಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.
ಮಹಿಳೆಯರು ಈ ಸೌಲಭ್ಯ ಉಪಯೋಗಿಸಿಕೊಳ್ಳುವಂತೆ ಬಿಎಂಟಿಸಿ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ