
ಪ್ರಗತಿವಾಹಿನಿ ಸುದ್ದಿ: ಬಮೂಲ್ ಚುನಾವಣೆ ಹಿನ್ನೆಲೆಯಲ್ಲಿ ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿ ಕೆ ಸುರೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಎಂಎಲ್ ಸಿಗಳಾದ ಪುಟ್ಟಣ್ಣ, ಎಸ್ ರವಿ, ಮುಖಂಡರಾದ ಆರ್ ಕೆ ರಮೇಶ್ ಮತ್ತಿತರರು ಜತೆಗಿದ್ದರು.