LatestNationalPolitics

*BREAKING: ಕಾಂಗ್ರೆಸ್-ಆಮ್ ಆದ್ಮಿ ಪಕ್ಷ ಮೈತ್ರಿ ಘೋಷಣೆ; ಯಾವ ರಾಜ್ಯದಲ್ಲಿ ಎಷ್ಟು ಸೀಟು ಹಂಚಿಕೆ?*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಮೈತ್ರಿ ಮಾಡಿಕೊಂಡಿವೆ.

ನವದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಹಾಗೂ ಆಪ್ ಮುಖಂಡರು ಮೈತ್ರಿ ಒಪ್ಪಂದಗಳ ಬಗ್ಗೆ ಮಾಹಿತಿ ನೀಡಿದರು. ಲೋಕಸಭಾ ಚುನಾವಣೆಯಲ್ಲಿ ಹರಿಯಾಣದಲ್ಲಿ ಒಂಭತ್ತು ಕ್ಷೇತ್ರ ಕಾಂಗ್ರೆಸ್ ಗೆ ಹಾಗೂ ಒಂದು ಕ್ಷೇತ್ರ ಆಪ್ ಗೆ. ಚಂಡೀಗಢ, ಗೋವಾದಲ್ಲಿ ಎಲ್ಲಾ ಕ್ಷೇತ್ರಗಳಿಂದ ಕಾಂಗ್ರೆಸ್ ಸ್ಪರ್ಧೆ ಮಾಡಲಿದೆ.

ದೆಹಲಿಯಲ್ಲಿ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಲಿದೆ. ನಾಲ್ಕು ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಗುಜರಾತ್ ನಲ್ಲಿ 24 ಕ್ಷೇತ್ರ ಕಾಂಗ್ರೆಸ್ ಪಾಲಿಗೆ. ೨ ಕ್ಷೇತ್ರ ಮಾತ್ರ ಆಪ್ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button