ಪ್ರಗತಿವಾಹಿನಿ ಸುದ್ದಿ: ಪುಣೆಯಲ್ಲಿ ಕುಡಿದ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಕಾರು ಚಲಾಯಿಸಿ, ಇಬ್ಬರ ಸಾವಿಗೆ ಕಾರಣನಾಗಿದ್ದ ಪ್ರಕರಣ ಮಾಸುವ ಮುನ್ನವೇ ಇದೀಗ ಮುಂಬೈನಲ್ಲಿ ಇಂಥದ್ದೇ ಘಟನೆ ಬೆಳಕಿಗೆ ಬಂದಿದೆ. BMW ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರ್ಲಿಯ ಕೋಳಿವಾಡದಲ್ಲಿ ನಡೆದಿದೆ.
ವೇಗವಾಗಿ ಬಂದ BMW ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಐಷಾರಾಮಿ ಬಿಎಂಡಬ್ಲ್ಯೂ ಕಾರನ್ನು ಅಪಘಾತದ ವೇಳೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬಣದ ನಾಯಕರೊಬ್ಬರ ಪುತ್ರ ಚಲಾಯಿಸುತ್ತಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ ಶಿವಸೇನೆ ನಾಯಕನ ಪುತ್ರ ಮಿಹಿರ್ ಶಾ ಕಾರು ಚಲಾಯಿಸುತ್ತಿದ್ದು, ಆತ ಪಾನಮತ್ತನಾಗಿದ್ದ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ