Vikalachetanara Day
Cancer Hospital 2
Bottom Add. 3

*ರಸ್ತೆ ಮಧ್ಯೆಯೇ ಇದ್ದಕ್ಕಿದ್ದಂತೆ ಹೊತ್ತಿ ಉರಿದ BMW ಕಾರು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಬಿಎಂ ಡಬ್ಲ್ಯು ಕಾರೊಂದು ರಾಷ್ಟ್ರೀಯ ಹೆದ್ದಾರಿ ಮಧ್ಯೆಯಲ್ಲಿ ಹೊತ್ತಿ ಉರಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ.

ಟೋಲ್ ಪ್ಲಾಜಾ ಬಳಿ ಕಾರು ನಿಲ್ಲಿಸುತ್ತಿದ್ದಂತೆ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾದರ್ಧದಲ್ಲಿ ಕಾರು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ತಕ್ಷಣ ಕಾರಿನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಕಾರಿನ ಎಂಜಿನ್ ನಲ್ಲಿ ಸಮಸ್ಯೆಯುಮ್ತಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.


Bottom Add3
Bottom Ad 2

You cannot copy content of this page