Film & EntertainmentKannada NewsKarnataka News

*ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕೈವಾಡ ಇದೆ ಎನ್ನಲಾಗಿದ್ದು, ಚಿತ್ರದುರ್ಗ ರೇಣುಕಾಸ್ವಾಮಿ ಅವರ ಮನೆಗೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಭೇಟಿ ಕೊಟ್ಟ ತಂಡ ರೇಣುಕಾಸ್ವಾಮಿ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರದ ಚೆಕ್ ನೀಡಿದೆ. ಫಿಲಂ ಚೇಂಬರ್‌ ಅಧ್ಯಕ್ಷ ಎಸ್.ಎನ್. ಸುರೇಶ ಮತ್ತು ಇತರ ಸದಸ್ಯರ ತಂಡ ಪರಿಹಾರದ ಚೆಕ್‌ ಅನ್ನು ರೇಣುಕಾಸ್ವಾಮಿ ಅವರ ಪತ್ನಿ ಸಹನಾಗೆ ಹಸ್ತಾಂತರಿಸಿದರು.

ಈ ವೇಳೆ ಕುಟುಂಬಸ್ಥರಿಗೆ ಸಮಾಧಾನದ ಮಾತುಗಳನ್ನು ಹೇಳಿದ ತಂಡ ನ್ಯಾಯ ದೊರಕಿಸಿಕೊಡುವುದಾಗಿ ಧೈರ್ಯ ತುಂಬಿದ್ದಾರೆ.  ಈ ವೇಳೆ ರೇಣುಕಾಸ್ವಾಮಿ ಕುಟುಂಬದವರು ತಂಡದ ಎದುರು ತಮ್ಮ ಅಳಲು ತೋಡಿಕೊಂಡರು. ನಮ್ಮ ಕುಟುಂಬಕ್ಕೆ ಆದ ಅನ್ಯಾಯ ಬೇರೆ ಯಾರಿಗೂ ಆಗದಿರಲಿ ಎಂದು ಅಲವತ್ತುಕೊಂಡರು. 

Home add -Advt

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆ ತಂದು ಹಿಂಸೆ ಕೊಟ್ಟು ಹತ್ಯೆ ಮಾಡಿದ್ದರು. ಈ ಸಂಬಂಧ ನಟ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾಗೌಡ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button