*ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕೈವಾಡ ಇದೆ ಎನ್ನಲಾಗಿದ್ದು, ಚಿತ್ರದುರ್ಗ ರೇಣುಕಾಸ್ವಾಮಿ ಅವರ ಮನೆಗೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಭೇಟಿ ಕೊಟ್ಟ ತಂಡ ರೇಣುಕಾಸ್ವಾಮಿ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರದ ಚೆಕ್ ನೀಡಿದೆ. ಫಿಲಂ ಚೇಂಬರ್‌ ಅಧ್ಯಕ್ಷ ಎಸ್.ಎನ್. ಸುರೇಶ ಮತ್ತು ಇತರ ಸದಸ್ಯರ ತಂಡ ಪರಿಹಾರದ ಚೆಕ್‌ ಅನ್ನು ರೇಣುಕಾಸ್ವಾಮಿ ಅವರ ಪತ್ನಿ ಸಹನಾಗೆ ಹಸ್ತಾಂತರಿಸಿದರು. … Continue reading *ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ*