Film & EntertainmentKannada NewsKarnataka News

*ಕಾಂತಾರ ಸಿನಿಮಾ ಶೂಟಿಂಗ್ ವೇಳೆ ಮಗುಚಿದ ದೋಣಿ: ಬದುಕುಳಿದ 30 ಜನ* 

ಪ್ರಗತಿವಾಹಿನಿ ಸುದ್ದಿ : ಕಾಂತಾರ – 1 ಸಿನಿಮಾ ಶೂಟಿಂಗ್ ಆರಂಭವಾದಾಗಿನಿಂದಲೂ ಒಂದೆಲ್ಲಾ ಒಂದು ಸಂಕಷ್ಟ ಎದುರಾಗುತ್ತಿದ್ದು ಇದೀಗ ಶೂಟಿಂಗ್ ವೇಳೆ ಭಾರಿ ದುರಂತವೊಂದು ನಡೆದಿದೆ.

ಈಗಾಗಲೇ ಚಿತ್ರತಂಡ ಮೂವರು ಕಲಾವಿದರನ್ನು ಕಳೆದುಕೊಂಡಿದೆ. ಇದರ ಬೆನ್ನಲ್ಲೆ ಶನಿವಾರ ರಾತ್ರಿ ಚಿತ್ರದ ನಾಯಕ ರಿಷಬ್ ಶೆಟ್ಟಿ ಸೇರಿದಂತೆ 30 ಕಲಾವಿದರಿದ್ದ ಬೋಟ್ ಮಗುಚಿದೆ.

ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಶೂಟಿಂಗ್ ದೋಣಿಯೇ ಮುಗಿಚಿಹೋಗಿದೆ. ಕ್ಯಾಮೆರಾಮ್ಯಾನ್, ನಟ ರಿಷಬ್ ಶೆಟ್ಟಿ ಸೇರಿದಂತೆ 30 ಮಂದಿ ಅದೃಷ್ಟವಶಾತ್ ಪರಾಗಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮಗುಚಿದೆ. ಬೋಟ್‌ನಲ್ಲಿದ್ದ ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ. 

ಚಿತ್ರದ ಕೊನೆಯ ಹಂತದ ಶೂಟಿಂಗ್ ಗಾಗಿ ತೀರ್ಥಹಳ್ಳಿಯ ಮಾಣಿ ಜಲಾಶಯದ ಬಳಿ 15 ದಿನಗಳ ಕಾಲ ಶೂಟಿಂಗ್ ನಡೆಸಲಾಗುತ್ತಿತ್ತು. ಶೂಟಿಂಗ್ ನಡೆಸುತ್ತಿದ್ದ ವೇಳೆ ದೋಣಿ ಮಗುಚಿದೆ ಎಂದು ಹೇಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button