Kannada NewsKarnataka NewsNational

*ಗಂಗಾನದಿಯಲ್ಲಿ ಮಗುಚಿದ 21 ಜನರಿದ್ದ ದೋಣಿ*

ಪ್ರಗತಿವಾಹಿನಿ ಸುದ್ದಿ: ಗಂಗಾ ನದಿಯಲ್ಲಿ 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ನದಿಯ ಮಧ್ಯಭಾಗದಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಮಗುಚಿದ ಭೀಕರ ಘಟನೆ ನಡೆದಿದೆ. 

ಬಿಹಾರದಲ್ಲಿ ಉಕ್ಕಿ ಹರಿಯುತ್ತಿರುವ ಗಂಗಾ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಪ್ರತ್ಯಕ್ಷದರ್ಶಿಗಳು ಹಾಗೂ ಸ್ಥಳೀಯರ ಸಹಾಯದಿಂದ 19 ಜನರನ್ನು ರಕ್ಷಿಸಲಾಗಿದೆ. ಇಬ್ಬರು ಪ್ರಯಾಣಿಕರು ನೀರಿನ ರಭಸಕ್ಕೆ ಕೊಚ್ಚಿಹೋಗಿ ನಾಪತ್ತೆಯಾಗಿದ್ದಾರೆ. 

Related Articles
Home add -Advt

ಈ ಘಟನೆ ನಡೆದ ತಕ್ಷಣ ಸ್ಥಳೀಯ ಮೀನುಗಾರರು ಮತ್ತು ಗ್ರಾಮಸ್ಥರು ರಕ್ಷಣೆಗೆ ಧಾವಿಸಿದ್ದು, 19 ಜನರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

ಪ್ರವಾಹದಲ್ಲಿ ಕೊಚ್ಚಿಹೋದ ಇಬ್ಬರಿಗಾಗಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ. 

Related Articles

Back to top button