Latest

ಮತ್ತೊಂದು ಭೀಕರ ರಸ್ತೆ ಅಪಘಾತ; ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ನಿಶ್ಚಿತಾರ್ಥಕ್ಕೆ ಹೊರಟಿದ್ದ ಟೆಂಪೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆ ಕುಕನೂರ ತಾಲೂಕಿನ ನಿಟ್ಟಾಲಿ ಬಳಿ ಸಂಭವಿಸಿದೆ.

ಟೆಂಪೋ ಬಾದಾಮಿಯಿಂದ ಕೊಪ್ಪಳದ ಹಿರೇಸೊಂಧೋಗಿಗೆ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದ್ದು, ಮೊದಲು ಬೈಕ್ ಗೆ ಡಿಕ್ಕಿಹೊಡೆದ ಟೆಂಪೋ ಬಳಿಕ ಮರಕ್ಕೆ ಗುದ್ದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

Related Articles

Back to top button