Belagavi NewsBelgaum News

*ಪ್ರತಿಭಟನೆ ವೇಳೆ ಪ್ರಜ್ಞೆತಪ್ಪಿ ಬಿದ್ದ ಉಪನ್ಯಾಸಕಿ: ಜಿಲ್ಲಾಸ್ಪತ್ರೆಗೆ ಕರೆದೊಯ್ದು ಖುದ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ವಿಧನಪರಿಷತ್ ಸದಸ್ಯ*

ಪ್ರಗತಿವಾಹಿನಿ ಸುದ್ದಿ: ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಬೆಳಗಾವಿ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಅತಿಥಿ ಉಪನ್ಯಾಸಕಿಯೊಬ್ಬರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.

ತಕ್ಷಣ ವಿಧಾನಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ ಖುದ್ದು ಉಪನ್ಯಾಸಕಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ತಾವೇ ಬೆಳಗಾವಿ ಜಿಲ್ಲಾಸ್ಪತ್ರೆಗೆ ಉಪನ್ಯಾಸಕಿಯನ್ನು ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

ಗೌರವ ಧನ ಹೆಚ್ಚಕ್ಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಬೆಳಗಾವಿ ಸುವರ್ಣ ಸೌಧದ ಬಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರು ಧರಣಿ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಪರಿಷತ್ ಸದಸ್ಯ ಡಾ.ಧನಂಜಯ್ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು.

Home add -Advt

ಈ ವೇಳೆ ಅತಿಥಿ ಉಪನ್ಯಾಸಕಿಯೊಬ್ಬರು ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಡಾ.ಧನಂಜಯ್ ಅತಿಥಿ ಉಪನ್ಯಾಸಕಿಗೆ ಪ್ರಥಮ ಚಿಕಿತ್ಸೆ ನೀಡಿ, ತಮ್ಮ ಕಾರಿನಲ್ಲಿಯೇ ಕರೆದೊಯ್ದು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

Related Articles

Back to top button