
ಪ್ರಗತಿವಾಹಿನಿ ಸುದ್ದಿ : ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಸುಬ್ರಹ್ಮಣ್ಯ ನಗರದ ಮಿಲ್ಕ್ ಕಾಲೋನಿಯಲ್ಲಿ ನಡೆದಿದೆ.
ಯುವತಿ ಶವ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವನ್ನಪ್ಪಿದ ಯುವತಿಯನ್ನು ದಾವಣಗೆರೆ ಮೂಲದ ಸುಪ್ರಿಯಾ (25) ಎಂದು ಗುರುತಿಸಲಾಗಿದೆ.
ಸುಪ್ರಿಯಾ ಬೈಕ್ ರೈಡಿಂಗ್ ತರಬೇತಿ ಸಹ ನೀಡುತ್ತಿದ್ದಳು. ಎರಡು ದಿನಗಳಿಂದ ಆಕೆ ವಾಸವಾಗಿದ್ದ ರೂಂ ಲಾಕ್ ಆಗಿತ್ತು. ಅನುಮಾನಗೊಂಡು ಮನೆ ಮಾಲೀಕರು ಬಾಗಿಲು ಓಪನ್ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ.
ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ಯುಡಿಆರ್ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಪೊಲೀಸರು ಆಕೆಯ ಕಾಲ್ ಲಿಸ್ಟ್, ಸಿಸಿ ಕ್ಯಾಮೆರಾ ಸೇರಿದಂತೆ ವಿವಿಧ ಸಾಕ್ಷ್ಯ ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ. ಸುಬ್ರಮಣ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




