ಪ್ರಗತಿವಾಹಿನಿ ಸುದ್ದಿ; ಲಕ್ನೋ: ಕುಡಿದ ಅಮಲಿನಲ್ಲಿ ತಂದೆಯೊಬ್ಬ ತನ್ನ 6 ವರ್ಷದ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘೋರ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ.
ಕಂಠಪೂರ್ತಿ ಕುಡಿದುಬಂದ ವ್ಯಕ್ತಿ ಮೊದಲು ಮನೆಯ ಸದಸ್ಯರ ಜೊತೆ ಜಗಳವಾಡಿದ್ದಾನೆ. ಬಳಿಕ ಕೋಪದ ಬರದಲ್ಲಿ ತನ್ನ 6 ವರ್ಷದ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಾಲಕಿಯ ಕಿರುಚಾಟ ಕೇಳಿ ಕುಟುಂಬ ಸದಸ್ಯರು ಬಂದು ನೋಡಿದಾಗ ಬಾಲಕಿ ಶೇ.20ರಷ್ಟು ಸುಟ್ಟು ಹೋಗಿದ್ದಳು.
ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.