Belagavi NewsBelgaum News
*ಬಾಯ್ಲರ್ ಸ್ಫೋಟ: ಓರ್ವ ಮಹಿಳೆ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಾಯ್ಲರ್ ಸ್ಫೋಟಗೊಂಡು ಮಹಿಳೆಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ.
ಶೋಭಾ ತೇಲಿ ಮೃತ ಮಹಿಳೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಟ್ಟಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಿಯಾ ಎಕ್ಸ್ ಪೋರ್ಟ್ ಕೈಗಾರಿಕಾ ಘಟಕದಲ್ಲಿ ಏಕಾಏಕಿ ಬಾಯ್ಲರ್ ಸ್ಫೋಟಗೊಂಡಿದೆ.
ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆಯೇ ಮಹಿಳೆ ಶೋಭಾ ಮೃತಪಟ್ಟಿದ್ದಾರೆ. ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
