ಪ್ರಗತಿವಾಹಿನಿ ಸುದ್ದಿ: ಕೆಮಿಕಲ್ ಕಂಪನಿಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಿಂದ ಎಂಟು ಮಂದಿ ಮೃತಪಟ್ಟಿದ್ದು 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮುಂಬೈಯ ಥಾಣೆಯಲ್ಲಿ ನಡೆದಿದೆ.
ಸ್ಫೋಟದಿಂದಾಗಿ ಮೃತರ ಮುಖ ಮತ್ತು ದೇಹದ ಭಾಗಗಳು ಸುಟ್ಟಿದ್ದರಿಂದ ಅವರ ಗುರುತು ಪತ್ತೆ ಮಾಡುವುದು ಪೊಲೀಸರಿಗೆ ಕಷ್ಟವಾಗುತ್ತಿದೆ. ಇನ್ನು ದುರಂತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಸಾವು-ನೋವು ಹೆಚ್ಚಾಗುವ ಸಾಧ್ಯತೆಗಳಿವೆ. ಈ ದುರಂತದಲ್ಲಿ ಹಲವು ಕಾರ್ಮಿಕರು ಕಾರ್ಖಾನೆ ಒಳಗೆ ಸಿಕ್ಕಿಹಾಕಿಕೊಂಡಿದ್ದರು.
ಡೊಂಬಿವ್ಲಿ ಎಂಐಡಿಸಿ ಪ್ರದೇಶದಲ್ಲಿರುವ ಅಮುದನ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ನಿನ್ನೆ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡಿದೆ. ಇದರ ಪರಿಣಾಮವಾಗಿ ಕಾರ್ಖಾನೆಗಳ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿವೆ. 2 ಕಿ.ಮೀ ವ್ಯಾಪ್ತಿಯಲ್ಲಿ ಸ್ಫೋಟದ ಸದ್ದು ಕೇಳಿಬಂದಿದ್ದು, ಕಟ್ಟಡದ 500 ಮೀಟರ್ ವ್ಯಾಪ್ತಿಯಲ್ಲಿರುವ ಮನೆಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ