Belagavi NewsBelgaum NewsKannada NewsKarnataka News

ಬೆಳಗಾವಿಯ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಇಬ್ಬರ ಸಾವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉಪ್ಪಿನಕಾಯಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಮೃತಪಟ್ಟು, ಮೂವರಿಗೆ ಗಂಭೀರ ಗಾಯವಾಗಿರುವ ದಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದಲ್ಲಿ ಇಂದು ನಡೆದಿದೆ.

ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಾಗ ಸ್ಥಳದಲ್ಲೇ ಸುನಂದಾ ತೇಲಿ ಎಂಬುವರು ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಶೋಭಾ ತೇಲಿ ಎನ್ನುವರು ಅಸುನೀಗಿದ್ದಾರೆ. ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದ್ದು, ಗಾಯಗೊಂಡವರನ್ನು ಗಡಿ ರಾಜ್ಯ ಮಹಾರಾಷ್ಟ್ರದ ಮೀರಜ್​​​​ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Related Articles

Back to top button