ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿ ಗಜ್ ಕೇಸರಿ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಲ್ಲಿ 22ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದು ಮೂವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಉಕ್ಕಿನ ಕಾರ್ಖಾನೆಯಲ್ಲಿ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಕರಗಿದ ಕಬ್ಬಿಣ ಕಾರ್ಮಿಕರ ಮೇಲೆ ಬಿದ್ದಿದ್ದು ಹಲವರಿಗೆ ಗಂಭೀರ ಗಾಯಗಳಾಗಿದೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ. ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಕರಗಿದ ಕಬ್ಬಿಣವು ಕಾರ್ಮಿಕರ ಮೇಲೆ ಬಿದ್ದಿದೆ.
ಗಂಭೀರಗಾಯವಾಗಿರುವ ಮೂವರನ್ನು ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಾವರದಲ್ಲಿನ ಸ್ಕ್ರ್ಯಾಪ್‌ನಿಂದ ಸ್ಟೀಲ್ ರಾಡ್‌ಗಳನ್ನು ತಯಾರಿಸಲಾಗುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ಕಂಪನಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ವರದಿಗಳಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ