Belagavi NewsBelgaum NewsKannada NewsKarnataka News

*ಬೊಲೆರೊ ವಾಹನಕ್ಕೆ ಬೆಂಕಿ: ಚೋರ್ಲಾ ಘಾಟ್ ನಲ್ಲಿ ಆತಂಕ ಸೃಷ್ಠಿ*

ಪ್ರಗತಿವಾಹಿನಿ ಸುದ್ದಿ: ಬೊಲೆರೊ ವಾಹನಕ್ಕೆ ಇದ್ದಕ್ಕಿದ್ದಂತೆಯೇ ಬೆಂಕಿ ಹೊತ್ತಿಕೊಂಡ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿರುವ ಘಟನೆ ಚೋರ್ಲಾ ಘಾಟ್ ನ ವಡಲೆ ಟಮ್ ಎಂಬ ದುರ್ಗಮ ಪ್ರದೇಶದಲ್ಲಿ ನಡೆದಿದೆ.

ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಅಗ್ನಿ ಅವಘಡದಲ್ಲಿ ಸಂಪೂರ್ಣ ವಾಹನ ಸುಟ್ಟು ಕರಕಲಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ಅಗ್ನಿ ಅವಘಡದಲ್ಲಿ ಸುಮಾರು 5 ಲಕ್ಷ ರೂ ಹಾನಿ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ಆದರೆ ಬೊಲೆರೊ ಜೀಪ್ ನಲ್ಲಿ ತುಂಬಿದ್ದ ಸುಮಾರು 2 ಲಕ್ಷ ರೂ ವಸ್ತುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

Home add -Advt

Related Articles

Back to top button