Kannada NewsKarnataka NewsLatest

*ಭೀಕರ ಅಪಘಾತ; ಅಥಣಿಯ ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಈ ಅಪಘತ ಸಂಭವಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ಮೂಲದವರಾದ ಉಮೇಶ್ ನಾಗಪ್ಪ, ಸಂತೋಷ್ ಸುರೇಶ್ ಮೃತರು.

ಬೊಲೆರೋ ವಾಹನ ಚಾಲಕ ಗಂಭೀರವಾಗಿ ಗಯಗೊಂಡಿದ್ದು, ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಹಿಂಬದಿಯಿಂದ ಡಿಕ್ಕಿಯಾಗಿದೆ.

Home add -Advt

ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button