Kannada NewsLatestWorld

*ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಸೇನಾ ವಿಮಾನ ಪತನ: 15 ಮಂದಿ ಸಾವು*

ಪ್ರಗತಿವಾಹಿನಿ ಸುದ್ದಿ: ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಸೇನಾ ವಿಮಾನ ಪತನಗೊಂಡು 15 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಾಂತ್ರಿಕ ದೋಷದಿಂದಾಗಿ ಹೆದ್ದಾರಿಗೆ ವಿಮಾನ ಅಪ್ಪಳಿಸಿದೆ. 15 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೊಲಿವಿಯಾದ ಎಲ್ ಆಲ್ಟೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.

ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ನೂರಾರು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಜ್ಜುಗುಜ್ಜಾಗಿದೆ.

ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

Related Articles

Back to top button