
ಪ್ರಗತಿವಾಹಿನಿ ಸುದ್ದಿ: ಮುಂಬೈ ನಿವಾಸದಲ್ಲಿ ಮಂಗಳವಾರ (ನವೆಂಬರ್ 11) ರಾತ್ರಿ ಕುಸಿದು ಬಿದ್ದಿರುವ ಕಾರಣ ಬಾಲಿವುಡ್ ನಟ ಗೋವಿಂದ ಆಸ್ಪತ್ರೆ ಸೇರಿದ್ದಾರೆ.
ನಟ ಗೊವಿಂದಾ ಅವರನ್ನು ಮುಂಬೈನ ಜುಹುವಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವಿಚಾರವನ್ನು ಅವರ ಗೆಳೆಯ ಹಾಗೂ ಅವರ ಕಾನೂನು ಸಲಹೆಗಾರ ಲಲಿತ್ ಬಿಂದಲ್ ಖಚಿತಪಡಿಸಿದ್ದಾರೆ.
ತಡರಾತ್ರಿ ಗೋವಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಈ ಸಂದರ್ಭದಲ್ಲಿ ಎಮರ್ಜೆನ್ಸಿ ವಾರ್ಡ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ.
ಅವರಿಗೆ ಹಲವು ಪರೀಕ್ಷೆಗಳನ್ನು ಮಾಡಲಾಗಿದ್ದು, ಅವುಗಳ ವರದಿ ಇನ್ನಷ್ಟೇ ಬರಬೇಕಿದೆ. ಗೋವಿಂದ ಪ್ರಜ್ಞೆತಪ್ಪಲು ಕಾರಣ ಇನ್ನೂ ಬಹಿರಂಗವಾಗಿಲ್ಲ. ಪರೀಕ್ಷಾ ವರದಿ ಬಂದ ಬಳಿಕ ಈ ವಿಚಾರ ರಿವೀಲ್ ಆಗಲಿದೆ.



