ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ಕಿಶೋರ್ ನಂದಲಸ್ಕರ್ ಕೊರೊನ ಸೋಂಕಿಗೆ ಬಲಿಯಾಗಿದ್ದಾರೆ.
81 ವರ್ಷದ ಕಿಶೋರ್ ನಂದಲಸ್ಕರ್ ಅವರಿಗೆ ಏಪ್ರಿಲ್ 14ರಂದು ಕೊರೊನಾ ದೃಢಪಟ್ಟಿತ್ತು. ಮಹಾರಾಷ್ಟ್ರದ ಥಾಣೆಯ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮರಾಠಿ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಕಿಶೋರ್ ಹಿಂದಿಯ ವಾಸ್ತವ್, ಸಂಗಮ್, ಸಿಂಬಾ ಸೇರಿದಂತೆ ಹಲವು ಚಿತ್ರಗಳಲ್ಲಿ ಗಮನ ಸೆಳೆದಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ