Film & EntertainmentKannada NewsLatest

*ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳ ಹಿಂದೆ ತೀವ್ರ ಅನಾರೋಗ್ಯಗಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಕೂಡ ಹರಡಿತ್ತು. ಈ ಬಗ್ಗೆ ಪತ್ನಿ, ನಟಿ ಹೇಮಾ ಮಾಲಿನಿ ಸುಳ್ಲು ಸುದ್ದಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಚೇತರಿಕೆ ಕಂಡ್ದ್ದ ಧರ್ಮೆಂದ್ರ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದರು.

ಇದೀಗ ಧರ್ಮೆಂದ್ರ ವಿಧಿವಶರಾಗಿದ್ದಾರೆ. ಹಿರಿಯ ನಟನ ಅಗಲಿಕೆಗೆ ಇಡೀ ಬಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ. ಸೂಪರ್ ಹಿಟ್ ಚಲನಚಿತ್ರ ಶೋಲೆ ಸೇರಿದಂತೆ 300 ಸಿನಿಮಾಗಳಲ್ಲಿ ಅಭಿನಯಿಸಿದ್ದ ಧರ್ಮೇಂದ್ರ ಆರು ದಶಕಗಳ ಕಾಲ ಬಾಲಿವುಡ್ ನಲ್ಲಿ ಮಿಂಚಿದ್ದರು. ಹೀಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ಧರ್ಮೇಂದ್ರ ಇನ್ನು ನೆನಪು ಮಾತ್ರ.

ನಟ ಧರ್ಮೆಂದ್ರ ಅವರ ಪಾರ್ಥೀವ ಶರೀರವನ್ನು ವಿಲೆ ಪಾರ್ಲೆ ಸ್ಮಶಾನಕ್ಕೆ ತರಲಾಗಿದ್ದು, ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್, ಅಮಿರ್ ಖಾನ್, ಇಶಾ ಡಿಯೋಲ್ ಸೇರಿದಂತೆ ಹಲವು ಗಣ್ಯರು ಧರ್ಮೇಂದ್ರ ಅವರ ಅಂತಿಮ ದರ್ಶನ ಪಡೆದಿದ್ದಾರೆ.

Home add -Advt


Related Articles

Back to top button