ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಅವರ ಮಗ ಅಭಿಷೇಕ್ ಬಚ್ಚನ್ ಗೆ ಕೊರೊನಾ ಸೋಂಕು ದೃಢ ಪಟ್ಟ ಬೆನ್ನಲ್ಲೇ ಇದೀಗ ಅಭಿಷೇಕ್ ಬಚ್ಚನ್-ಪತ್ನಿ ಐಶ್ವರ್ಯಾ ರೈ ಹಾಗೂ ಪುತ್ರಿ ಆರಾಧ್ಯಗೂ ಕೊವಿಡ್ ಪಾಸಿಟೀವ್ ಬಂದಿದೆ.
ಶನಿವಾರ ರಾತ್ರಿ ಬಿಗ್ ಬಿ ಅಮಿತಾಬ್ ಬಚ್ಚನ್ ತಮಗೆ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು. ತಂದೆ ಅಮಿತಾಬ್ ಬಚ್ಚನ್ ಬಳಿಕ ಟ್ವೀಟ್ ಮಾಡಿದ್ದ ಅಭಿಷೇಕ್ ತಮ್ಮ ವರದಿಯೂ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದರು. ಇದೀಗ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ತಗುಲಿರುವುದು ಖಚಿತವಾಗಿದೆ.
ಅಭಿಷೇಕ್ ಮತ್ತು ಅಮಿತಾಬ್ ಬಚ್ಚನ್ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಐಶ್ವರ್ಯಾ ರೈ ಹಾಗೂ ಆರಾಧ್ಯಾಗೂ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಬಿಗ್ ಬಿ ಪತ್ನಿ ಜಯಾ ಬಚ್ಚನ್ ಕೊವಿಡ್ ವರದಿ ನೆಗೆಟಿವ್ ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ