Latest

ಬಾಲಿವುಡ್ ನಟನಿಗೂ ಆರಂಭವಾದ ಕೊರೊನಾ ಭೀತಿ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಗೂ ಕೊರೊನಾ ಆತಂಕ ಆರಂಭವಾಗಿದೆ. ಅಮೀರ್ ಖಾನ್ ಅವರ ಮನೆ ಕೆಲಸದವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅಮೀರ್ ಖಾನ್ ಕುಟುಂಬ ಹೋಂ ಕ್ವಾರಂಟೈನ್ ಆಗಿದ್ದಾರೆ.

ಅಮೀರ್ ಖಾನ್ ಮನೆಯ ಅಡುಗೆ ಕೆಲಸದವರಿಗೆ, ಮನೆ ಕೆಲಸದವರು, ಭದ್ರತಾ ಸಿಬ್ಬಂದಿ ಸೇರಿ ಒಟ್ಟು 7 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಅಮೀರ್ ಖಾನ್, ನಮ್ಮ ಮನೆಯ ಕೆಲವು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ತಕ್ಷಣ ನಾವು ಹೋಮ್ ಕ್ವಾರಂಟೈನ್ ಆಗಿದ್ದೇವೆ. ಬಿಎಂಸಿ (ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್) ಅಧಿಕಾರಿಗಳು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ತ್ವರಿತವಾಗಿ ಕರೆದುಕೊಂಡು ಹೋದರು. ಆದ್ದರಿಂದ ಶೀಘ್ರವೇ ಕಾಳಜಿ ವಹಿಸಿದ್ದಕ್ಕಾಗಿ ಮತ್ತು ಕಟ್ಟಡವನ್ನು ಸೋಂಕು ನಿವಾರಕ ದ್ರಾವಣದಿಂದ ಸ್ವಚ್ಛಗೊಳಿಸಿದ್ದಕ್ಕಾಗಿ ಬಿಎಂಸಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನಮ್ಮ ಕುಟುಂಬದವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಎಲ್ಲರದ್ದು ನೆಗೆಟಿವ್ ಬಂದಿದೆ. ಇದೀಗ ನಾನು ನನ್ನ ತಾಯಿಯನ್ನು ಕೊರೊನಾ ಪರೀಕ್ಷೆಗಾಗಿ ಕರೆದುಕೊಂಡು ಹೋಗುತ್ತಿದ್ದೇನೆ. ಅವರಿಗೆ ಕೊರೊನಾ ನೆಗೆಟಿವ್ ಬರಲಿ ಎಂದು ದಯವಿಟ್ಟು ಪ್ರಾರ್ಥಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

 

Home add -Advt

Related Articles

Back to top button